alex Certify ಟಿಇಟಿ ಪಾಸಾದವರಿಗೆ ಗುಡ್ ನ್ಯೂಸ್: ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಇಟಿ ಪಾಸಾದವರಿಗೆ ಗುಡ್ ನ್ಯೂಸ್: ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ/ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6ರಿಂದ 10ನೇ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು ಕೆಳಕಂಡ ವಿಷಯಗಳ ಖಾಲಿಯಿರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ಟಿ.ಇ.ಟಿ. ಉತ್ತೀರ್ಣರಾಗಿರಬೇಕು. ಕನಿಷ್ಟ ಎರಡು ವರ್ಷದ ಅನುಭವ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಕನ್ನಡ ವಿಷಯದ 5 ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎ. ಬಿ.ಇಡಿ, ಇಂಗ್ಲೀಷ ವಿಷಯದ 10 ಹುದ್ದೆಗಳಿಗೆ ಬಿ.ಎ. ಬಿ.ಇಡಿ. ಪಾಸಾಗಿರಬೇಕು. ವಿಜ್ಞಾನ ವಿಷಯದ 12 ಹುದ್ದೆಗಳಿಗೆ ಬಿ.ಎಸ್ಸಿ. ಬಿ.ಇಡಿ (ಸಿ.ಬಿ.ಝಡ್), ಗಣಿತ ವಿಷಯದ 14 ಹುದ್ದೆಗಳಿಗೆ ಬಿ.ಎಸ್ಸಿ. ಬಿ.ಇಡಿ. (ಪಿ.ಸಿ.ಎಂ.), ಸಮಾಜ ವಿಜ್ಞಾನ ವಿಷಯದ 10 ಹುದ್ದೆಗಳಿಗೆ ಬಿ.ಎ. ಬಿ.ಇಡಿ. ಹಾಗೂ ಉರ್ದು ವಿಷಯದ 01 ಹುದ್ದೆಗೆ ಬಿ.ಎ.ಬಿ.ಎಡ್. ವಿದ್ಯಾರ್ಹತೆ ಹೊಂದಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು 2022ರ ಜೂನ್ 7 ರೊಳಗಾಗಿ ಸಂಬಂಧಪಟ್ಟ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕುಗಳ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಕಲಬುರಗಿ ಮತ್ತು ಅಫಜಲಪೂರ ಮೊಬೈಲ್ ಸಂಖ್ಯೆ 9741279422, ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಜೇವರ್ಗಿ-9535775141, ಆಳಂದ 8147775722, ಸೇಡಂ- 7892369798, ಚಿತ್ತಾಪೂರ-9741168681 ಹಾಗೂ ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯಾಲಯದ ದೂರವಾಣಿ ಸಂಖ್ಯೆ 08472-247260 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...