ನವದೆಹಲಿ: ಕೇಂದ್ರ ಸರ್ಕಾರದಿಂದ ‘ಪಿಎಂ ಶ್ರೀ ಶಾಲೆ’ಗಳನ್ನು ಸ್ಥಾಪಿಸಲು ಚಿಂತನೆ ನಡೆದಿದ್ದು, ಇವು ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಗಶಾಲೆಗಳಾಗಿವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಗುಜರಾತ್ ನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ಭವಿಷ್ಯತ್ತಿಗಾಗಿ ಸಿದ್ಧಪಡಿಸಲು ಕೇಂದ್ರ ಸರ್ಕಾರ ‘ಪಿಎಂ ಶ್ರೀ ಶಾಲೆ’ಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ. 21ನೇ ಶತಮಾನದಲ್ಲಿ ಮಕ್ಕಳಿಗೆ ಜ್ಞಾನ, ಕೌಶಲ್ಯಾಧಾರಿತ ಶಿಕ್ಷಣ ನೀಡಲು ಈ ಶಾಲೆಗಳನ್ನು ಸ್ಥಾಪಿಸಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಗಶಾಲೆಗಳಾಗಿರುವ ‘ಪಿಎಂ ಶ್ರೀ ಶಾಲೆ’ಗಳನ್ನು ಆರಂಭಿಸುವ ಕುರಿತಂತೆ ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯ ಸರ್ಕಾರಗಳು ಸಲಹೆ ನೀಡುವಂತೆ ಅವರು ತಿಳಿಸಿದ್ದಾರೆ.