ರಾಯಚೂರು: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, ನಗರಸಭೆ ನಿರ್ಲಕ್ಷದ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ನಾಗರಿಕ ಹೋರಾಟ ವೇದಿಕೆಯಿಂದ ರಾಯಚೂರು ಬಂದ್ ಗೆ ಕರೆ ನೀಡಲಾಗಿದೆ. ಕಲುಷಿತ ನೀರು ಸೇವನೆಯಿಂದ ಮಲ್ಲಮ್ಮ, ಅಬ್ದುಲ್ ಮತ್ತು ನೂರ್ ಮೃತಪಟ್ಟಿದ್ದಾರೆ. ನೂರಾರು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ್ದಾರೆ.
ನಗರಸಭೆ ನಿರ್ಲಕ್ಷ್ಯ ತೋರಿದ್ದು, ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ಅಸ್ವಸ್ಥರಿಗೆ ಆಸ್ಪತ್ರೆ ಚಿಕಿತ್ಸೆ ವೆಚ್ಚ ಭರಿಸಬೇಕು ಎಂದು ಆಗ್ರಹಿಸಿ ಇಂದು ರಾಯಚೂರು ಬಂದ್ ಗೆ ಕರೆ ನೀಡಲಾಗಿದೆ.