ರಾಮನಗರ: ಒಂದೇ ಕುಟುಂಬದ ಮೂವರು ಮಹಿಳೆಯರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದಿದೆ.
ಕೌಟುಂಬಿಕ ಕಲಹಕ್ಕೆ ಬೇಸತ್ತು ಮೂವರು ಮಹಿಳೆಯರು ಮಾಗಡಿ ಟೌನ್ ನ ಗೌರಮ್ಮ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮತ್ತಿಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಶಾಂತಾಬಾಯಿ (50) ಮೃತ ಮಹಿಳೆ. ಉಷಾಬಾಯಿ, ನಿರ್ಮಲಾ ಬಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರಿಬ್ಬರೂ ಮೃತ ಮೃದ್ದೆ ಶಾಂತಾಬಾಯಿ ಮಗಳು ಹಾಗೂ ಮೊಮ್ಮಕ್ಕಳಾಗಿದ್ದಾರೆ.
ಮಾಗಡಿ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.