ರಾಯಚೂರು; ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.
ಪ್ರಕರಣದ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, ಕುಟುಂಬದವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಿದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಲಾಗಿದೆ. ನೀರಿನ ಮಾದರಿ ಸಂಗ್ರಹಿಸಿ ತಪಾಸಣೆಗೆ ಕಳುಹಿಸಲಾಗುವುದು ಎಂದರು.
ಕಲುಷಿತ ನೀರು ಕುಡಿದು ಮೂವರ ಸಾವು ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆಯಲ್ಲಿ ರಾಂಪುರ ಬಳಿ ನೀರು ಶುದ್ಧೀಕರಣ ಘಟಕವನ್ನು ಕಳೆದ 16 ವರ್ಷಗಳಿಂದ ಸ್ವಚ್ಛಗೊಳಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ನಿಯಮದ ಪ್ರಕಾರ ಮೂರು ತಿಂಗಳಿಗೊಮ್ಮೆ ಸ್ವಚ್ಛಗೊಳಿಸಬೇಕು ಆದರೆ ನಿಯಮವನ್ನೇ ಉಲ್ಲಂಘಿಸಲಾಗಿದೆ.
ಈ ನಡುವೆ ನೀರು ಸೇವಿಸಿದ 20ಕ್ಕೂ ಹೆಚ್ಚು ಜನರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಮೂತ್ರಪಿಂಡ ಸಮಸ್ಯೆ ಕೂಡ ಕಾಣಿಸಿಕೊಂಡಿದೆ. ರಿಮ್ಸ್ ಆಸ್ಪತ್ರೆಗೆ ಹಲವರನ್ನು ದಾಖಲಿಸಲಾಗಿದ್ದು, ವೈದ್ಯರ ತಂಡ ನಿಗಾ ವಹಿಸಿದೆ.