ತಿರುವನಂತಪುರಂ: ವಿಷಾಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೇರಳದ 8 ಮಕ್ಕಳ ಪೈಕಿ ಇದೀಗ ಇಬ್ಬರು ಮಕ್ಕಳಲ್ಲಿ ಸಾಂಕ್ರಾಮಿಕ ರೋಗ ನೊರೊವೈರಸ್ ಪತ್ತೆಯಾಗಿದ್ದು, ಹೊಸ ಆತಂಕ ಸೃಷ್ಟಿಸಿದೆ.
ಆಲಪ್ಪುಳ ಜಿಲ್ಲೆಯ ಕಾಯಂಕುಲಂನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8 ಮಕ್ಕಳು ವಿಷಾಹಾರ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ ಇಬ್ಬರು ಮಕ್ಕಳಲ್ಲಿ ಇದೀಗ ನೊರೊವೈರಸ್ ದೃಢಪಟ್ಟಿದೆ. ಇದು ಸಾಂಕ್ರಾಮಿಕ ರೋಗವಾಗಿರುವುದರಿಂದ ವೈರಸ್ ಹರಡುವ ಸಾಧ್ಯತೆ ದಟ್ಟವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
BIG NEWS: ಕಲುಷಿತ ನೀರು ಸೇವಿಸಿ ಮೂವರ ದುರ್ಮರಣ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ
ಆಹಾರ ಹಾಗೂ ಕಲುಷಿತ ನೀರಿನಿಂದಾಗಿ ಈ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ. ಆದರೆ ಈ ರೋಗವನ್ನು ಗುಣಪಡಿಸಬಹುದಾಗಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.