ಕೋಲಾರ: ಕೋಲಾರ ಜಿಲ್ಲೆ ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಇಂದು ಬೆಳಗ್ಗೆ ದೇವಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮುತ್ಯಾಲಪೇಟೆಯ ಗಂಗಮ್ಮ ದೇಗುಲಕ್ಕೆ ಜಗನ್ ಮೋಹನ್ ತೆರಳುತಿದ್ದರು. ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.
ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಜಗನ್ ಮೋಹನ್ ಸಾವನ್ನಪ್ಪಿದ್ದಾರೆ. ಕೊಲೆಯಾದ ಜಗನ್ ಮೋಹನ್ ಕೊತ್ತನೂರು ಮಂಜುನಾಥ್ ಬೆಂಬಲಿಗನಾಗಿದ್ದಾನೆ. ಮುಳಬಾಗಿಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.