ಬೆಂಗಳೂರು: ಜೂನ್ 13 ರಂದು ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದೆ. 4 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಮತದಾನದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲಾಗಿದೆ.
ಚುನಾವಣಾ ಆಯೋಗ ಮತದಾನದ ಅವಧಿಯನ್ನು ಒಂದು ಗಂಟೆ ವಿಸ್ತರಣೆ ಮಾಡಿದೆ. ವಾಯುವ್ಯ ಪದವೀಧರ ಕ್ಷೇತ್ರ, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮತದಾನದ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಮೊದಲು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮಾತ್ರ ಮತದಾನದ ಅವಧಿ ಇತ್ತು. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎನ್ನಲಾಗಿದೆ.