ರಾಜ್ಯದ ಚಿಕ್ಕಮಗಳೂರು ಹಾಗೂ ಕರಾವಳಿ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಕೆಲವು ದಿನಗಳಿಂದ ಸೆಟಲೈಟ್ ಫೋನ್ ಬಳಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳುವುದರ ಜೊತೆಗೆ ತನಿಖೆಯನ್ನು ತೀವ್ರಗೊಳಿಸಲಾಗಿದೆ.
ಇದೀಗ ಸ್ಯಾಟಲೈಟ್ ಫೋನ್ ಶಿವಮೊಗ್ಗ ಜಿಲ್ಲೆಯ ಸಾಗರ (ಸಿಗಂದೂರು) ಮತ್ತು ಶಿಕಾರಿಪುರದಲ್ಲಿ ಬಳಕೆಯಾಗಿರಬಹುದು ಎಂದು ಐ.ಎಸ್.ಡಿ. ಅಧಿಕಾರಿಗಳು ತಿಳಿಸಿದ್ದಾರೆನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಪ್ರವಾಸಿಗರ ಸೋಗಿನಲ್ಲಿ ಬಂದ ಅನಿವಾಸಿ ಭಾರತೀಯರಿಂದ ಸ್ಯಾಟಲೈಟ್ ಫೋನ್ ಬಳಕೆಯಾಗಿರಬಹುದು ಎಂದು ಹೇಳಲಾಗಿದ್ದು, ಯಾವ ಕಾರಣಕ್ಕೆ ಈ ಎರಡು ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡಿದ್ದರು ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.