ಕಳೆದ ಎರಡು ವರ್ಷಗಳ ಹಿಂದೆ ದೇಶದಲ್ಲಿ ಕಾಣಿಸಿಕೊಂಡ ಕಾರಣ ಮಹಾಮಾರಿ ಜನಸಾಮಾನ್ಯರನ್ನು ಇನ್ನಿಲ್ಲದಂತೆ ಕಾಡಿದೆ. ವಿಶ್ವದಾದ್ಯಂತ ಕೋಟ್ಯಾಂತರ ಮಂದಿ ಈ ಮಹಾಮಾರಿಗೆ ಬಲಿಯಾಗಿದ್ದು, ಈಗಲೂ ಸಹ ಕೊರೊನಾ ಹಲವು ರಾಷ್ಟ್ರಗಳಲ್ಲಿ ವ್ಯಾಪಕವಾಗುತ್ತಲೇ ಇದೆ.
ಇದರ ಮಧ್ಯೆ ಮಳೆ ನಿಂತರೂ ಮರದ ಹನಿ ನಿಲ್ಲುವುದಿಲ್ಲ ಎಂಬಂತೆ ಕೊರೊನಾ ಕುರಿತ ಒಂದೊಂದೇ ಶಾಕಿಂಗ್ ಸಂಗತಿಗಳು ಬಹಿರಂಗವಾಗುತ್ತಿವೆ. ಒರೆಗಾಂವ್ ಸ್ಟೇಟ್ ಯೂನಿವರ್ಸಿಟಿ ಸಂಶೋಧಕರು ನಡೆಸಿರುವ ಅಧ್ಯಯನದಲ್ಲಿ ಕೋವಿಡ್ ಸೋಂಕು ತಗುಲಿದ ಕೆಲವೇ ತಿಂಗಳಲ್ಲಿ ಮಾನಸಿಕ ಅಸ್ವಸ್ಥತೆ ಉಂಟಾಗುವ ಅಪಾಯ ಅಧಿಕ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿತ ವ್ಯಕ್ತಿಗಳಲ್ಲಿ ಸೋಂಕು ತಗುಲಿದ ನಾಲ್ಕು ತಿಂಗಳಲ್ಲಿ ಮಾನಸಿಕ ಅಸ್ವಸ್ಥತೆ ಸಂಭವ ಶೇಕಡ 25ರಷ್ಟು ಎಂಬ ಸಂಗತಿಯನ್ನು ಸಂಶೋಧಕರು ಪತ್ತೆ ಹಚ್ಚಿದ್ದಾರೆ. ಈ ಅಧ್ಯಯನ ವರದಿ ‘ವರ್ಲ್ಡ್ ಸೈಕಿಯಾಟ್ರಿ’ ಪತ್ರಿಕೆಯಲ್ಲಿ ಪ್ರಕಟವಾಗಿದೆ.