ರಾಯಚೂರು: ರಾಯಚೂರಿನಲ್ಲಿ ಕಲುಷಿತ ಕುಡಿಯುವ ನೀರೀಗೆ ಇದೀಗ ಮತ್ತೋರ್ವ ಬಲಿಯಾಗಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೇರಿಕೆಯಾಗಿದೆ.
ರಾಯಚೂರು ಜಿಲ್ಲೆಯ ರಾಂಪುರ ಶುದ್ಧ ಕುಡಿಯುವ ನೀರಿನ ಘಟಕದ ನೀರು ಸೇವಿಸಿದ್ದ ಗ್ರಾಮಸ್ಥರು ಅನಾರೋಗ್ಯಕ್ಕೀಡಾಗಿದ್ದು, 60ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ, ಹೊಟ್ಟೆನೋವು, ಕಿಡ್ನಿ ಸಮಸ್ಯೆ ಕಾಣಿಸಿಕೊಂಡಿದೆ. ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲುಷಿತ ನೀರಿನಿಂದಾಗಿ ಈಗಾಗಲೇ ಮೂವರು ಸಾವನ್ನಪ್ಪಿದ್ದು, ಇಂದು ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ವ್ಯಕ್ತಿ ಕೂಡ ಮೃತಪಟ್ಟಿದ್ದಾರೆ.
50 ವರ್ಷದ ಅಬ್ದುಲ್ ಕರಿಂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕಳೆದ ಮೂರು ದಿನಗಳಿಂದ ಅಬ್ದುಲ್ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.