ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ನಡೆಯುತ್ತಿರುವುದರ ಮಧ್ಯೆ ಮಂಗಳೂರು ನಗರದ ವಿಶ್ವವಿದ್ಯಾಲಯ ಕಾಲೇಜು ತರಗತಿಯ ವಿದ್ಯಾರ್ಥಿಗಳು ವೀರ ಸಾವರ್ಕರ್ ಭಾವಚಿತ್ರವನ್ನು ಅಳವಡಿಸಿರುವ ಘಟನೆ ನಡೆದಿದೆ.
ಈ ಕಾಲೇಜಿನ ಕೆಲ ವಿದ್ಯಾರ್ಥಿಗಳು ಆಡಳಿತ ಮಂಡಳಿಯ ಅನುಮತಿ ಪಡೆಯದೆ ಭಾರತ ಮಾತೆ ಹಾಗೂ ವೀರ ಸಾವರ್ಕರ್ ಭಾವಚಿತ್ರವನ್ನು ತರಗತಿಯ ಗೋಡೆ ಮೇಲಿನ ಕರಿ ಹಲಗೆ ಮೇಲೆ ಅಳವಡಿಸಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಆದರೆ ನ್ಯಾಯಾಲಯದ ಆದೇಶದಂತೆ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು ಎಂಬ ಸೂಚನೆ ಇರುವ ಹಿನ್ನೆಲೆಯಲ್ಲಿ ಬಳಿಕ ಈ ಭಾವಚಿತ್ರಗಳನ್ನು ತೆರವುಗೊಳಿಸಲಾಗಿದೆ.