ಇಂಧನ ಇಲಾಖೆ ಕಛೇರಿಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಸರ್ಕಾರ ತೀರ್ಮಾನಿಸಿದ್ದು, ಈ ಕುರಿತ ಅನುಮೋದನೆಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
ಇಂಧನ ಸಚಿವ ಸುನೀಲ್ ಕುಮಾರ್ ಮಾಧ್ಯಮ ಪ್ರತಿನಿಧಿಗಳಿಗೆ ಈ ಮಾಹಿತಿ ನೀಡಿದ್ದು, ವಿದ್ಯುತ್ ಚಾಲಿತ ವಾಹನಗಳ ಬೆಲೆ, ಪೆಟ್ರೋಲ್ ಹಾಗೂ ಡಿಸೇಲ್ ವಾಹನಗಳ ಬೆಲೆಗಿಂತ ದುಬಾರಿ ಇರುವುದರಿಂದ, ಇಲೆಕ್ಟ್ರಿಕ್ ವಾಹನ ಬಳಕೆಗೆ ಇನ್ನೂ ಒಪ್ಪಿಗೆ ದೊರೆತಿಲ್ಲ ಎಂದಿದ್ದಾರೆ.
ಇಂಧನ ಇಲಾಖೆ ಅಧೀನದಲ್ಲಿ ಬರುವ ಎಲ್ಲ ಕಚೇರಿಗಳಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಮೂರು ತಿಂಗಳ ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ ಎಂದು ಸಚಿವರು ಹೇಳಿದ್ದಾರೆ.