ಬೆಂಗಳೂರು: ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಳ್ಳದಿರುವ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಳ್ಳದ ಅಧಿಕಾರಿಗಳು ಮತ್ತು ನೌಕರರ ಮಾಹಿತಿ ಕಲೆಹಾಕಿ ಸರ್ಕಾರಕ್ಕೆ ನೀಡುವಂತೆ ಸುತ್ತೋಲೆ ಹೊರಡಿಸಲಾಗಿದೆ.
ಸುಮಾರು 5.40 ಲಕ್ಷ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕು ಎಂದು ಸರ್ಕಾರ ಆದೇಶ ನೀಡಿದ್ದು, ಸುಮಾರು 2.50 ಲಕ್ಷಕ್ಕೂ ಅಧಿಕ ಅಧಿಕಾರಿಗಳು ಮತ್ತು ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಂಡಿದ್ದಾರೆ. ಹೀಗೆ ಪರೀಕ್ಷೆ ತೆಗೆದುಕೊಂಡವರಲ್ಲಿ 1,73,500 ಅಧಿಕಾರಿಗಳು, ನೌಕರರು ಉತ್ತೀರ್ಣರಾಗಿದ್ದಾರೆ.
ಸುಮಾರು 3.5 ಲಕ್ಷ ಸರ್ಕಾರಿ ನೌಕರರು ಪರೀಕ್ಷೆ ತೆಗೆದುಕೊಳ್ಳಬೇಕಿದೆ. ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಮಾಡಿಕೊಳ್ಳಲು ಡಿಸೆಂಬರ್ 31 ರ ವರೆಗೆ ಗಡುವು ನೀಡಲಾಗಿದೆ. ಈ ಅವಧಿಯೊಳಗೆ ಉತ್ತೀರ್ಣರಾಗದ ನೌಕರರು ಮತ್ತು ಅಧಿಕಾರಿಗಳು ಮುಂಬಡ್ತಿ, ವಾರ್ಷಿಕ ವೇತನ ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ಹೇಳಲಾಗಿದೆ.