ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಬಿಗಡಾಯಿಸಿದ ಕಾರಣ ಅವರಿಗೆ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನದ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.