ಜೂನ್ 13ರಂದು ವಿಧಾನ ಪರಿಷತ್ ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅರ್ಹ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳ ಅರ್ಹ ಮತದಾರರಿಗೆ ಈ ರಜೆ ಅನ್ವಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ 11 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾಯಂ ಅಥವಾ ಅರೆಕಾಲಿಕ ಕೆಲಸ ಮಾಡುತ್ತಿರುವ ಮತದಾನಕ್ಕೆ ಅರ್ಹರಿರುವ ಪದವೀಧರರು ಹಾಗೂ ಶಿಕ್ಷಕರಿಗೆ ಈ ವಿಶೇಷ ಸಾಂದರ್ಭಿಕ ರಜೆ ಅನ್ವಯವಾಗಲಿದೆ ಎಂದು ಹೇಳಲಾಗಿದೆ.