ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಮತ್ತೆ ಕಿಲ್ಲರ್ ಅವತಾರದಲ್ಲಿ ಬೈಕ್ ಸವಾರನನ್ನು ಬಲಿ ಪಡೆದಿದೆ.
ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಮುಖ್ಯರಸ್ತೆಯ ಆನಂದ್ ಸಭಾ ಕಲ್ಯಾಣ ಮಂಟಪದ ಬಳಿ ನಡೆದಿದೆ.
ಉತ್ತರಹಳ್ಳಿ ನಿವಾಸಿ ಗುಣಶಂಕರ್ ಮೃತರು. ಬನ್ನೇರುಘಟ್ಟದಿಂದ ಬೆಂಗಳೂರು ನಗರ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಬೈಕ್ ಸವಾರ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.