alex Certify ಹಿಂದೂ ಸಮಾಜ ಒಡೆಯುವ ಉದ್ದೇಶದಿಂದ ಪಠ್ಯ ಪರಿಷ್ಕರಣೆಗೆ ಆಕ್ಷೇಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದೂ ಸಮಾಜ ಒಡೆಯುವ ಉದ್ದೇಶದಿಂದ ಪಠ್ಯ ಪರಿಷ್ಕರಣೆಗೆ ಆಕ್ಷೇಪ

ಹಾಸನ: ಶಾಲಾ ಪಠ್ಯ ಪರಿಷ್ಕರಣೆ ಬಗ್ಗೆ ವಿರೋಧ ಪಕ್ಷಗಳಿಂದ ಆಕ್ಷೇಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಹಿಂದೂ ಸಮಾಜವನ್ನು ಒಡೆಯುವ ಉದ್ದೇಶದಿಂದ ಈ ರೀತಿ ಆಕ್ಷೇಪಿಸಿದ್ದಾರೆ ಎಂದು ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ರಾಜೀನಾಮೆ ನೀಡುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದಾಗ ಕುವೆಂಪು ಪಠ್ಯಕ್ಕೆ ಕತ್ತರಿ ಹಾಕಿದ್ದರು. ಇದರ ಬಗ್ಗೆ ಮೊದಲು ಉತ್ತರಿಸಿ ಆಮೇಲೆ ನನ್ನ ಬಗ್ಗೆ ಪ್ರಶ್ನಿಸಲಿ ಎಂದು ಹೇಳಿದ್ದು, ಈ ಮೂಲಕ ಸಿದ್ದರಾಮಯ್ಯನವರ ರಾಜೀನಾಮೆ ಒತ್ತಾಯಕ್ಕೆ ತಿರುಗೇಟು ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...