ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಧಾರವಾಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ ಟೇಬಲ್ ಇಸ್ಮಾಯಿಲ್ ನನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಪರೀಕ್ಷೆ ಬರೆದು ಇಸ್ಮಾಯಿಲ್ ಇನ್ ಸರ್ವೀಸ್ ಕೋಟಾದಲ್ಲಿ ಆಯ್ಕೆಯಾಗಿದ್ದ.
ಇದೀಗ ಮಹಾರಾಷ್ಟ್ರದ ಪುಣೆಯಲ್ಲಿ ಇಸ್ಮಾಯಿಲ್ ನನ್ನು ಕಲಬುರ್ಗಿ ಸ್ಟೇಷನ್ ಬಜಾರ್ ಠಾಣೆ, ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಇಸ್ಮಾಯಿಲ್ ಗೋವಾದಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದ ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇಸ್ಮಾಯಿಲ್ ಜಾಡು ಹಿಡಿದ ಪೊಲೀಸರು ಇದೀಗ ಪುಣೆಯಲ್ಲಿ ಬಂಧಿಸಿದ್ದಾರೆ.