ದೇಶದ ಪ್ರತಿಷ್ಠಿತ ಉದ್ಯಮಿ ಟಾಟಾ ಗ್ರೂಪ್ ಮುಖ್ಯಸ್ಥ ರತನ್ ಟಾಟಾ ಅವರಿಗೆ ಮಹಾರಾಷ್ಟ್ರದ HSNC ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿ ಸನ್ಮಾನಿಸಿದೆ. ಸಮಾಜಕ್ಕೆ ರತನ್ ಟಾಟಾ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಪದವಿಯನ್ನು ನೀಡಲಾಗಿದೆ.
ಶನಿವಾರದಂದು ನಡೆದ ವಿಶ್ವವಿದ್ಯಾನಿಲಯದ ಘಟಿಕೋತ್ಸವದ ಸಂದರ್ಭದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಕೋಶಿಯಾರಿ, ರತನ್ ಟಾಟಾ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿದ್ದಾರೆ.
Big News: ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ ಸೆಲೆಬ್ರಿಟಿ ‘ಫ್ಯಾಷನ್’ ಡಿಸೈನರ್
ರತನ್ ಟಾಟಾ ಅವರು ಅಭಿವೃದ್ಧಿ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದು ಇದನ್ನು ಪರಿಗಣಿಸಿ ಅವರಿಗೆ ಗೌರವ ಡಾಕ್ಟರೇಟ್ ನೀಡುತ್ತಿರುವುದಾಗಿ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಭಗತ್ ಕೋಶಿಯಾರಿ ಹೇಳಿದ್ದಾರೆ.