ಮಧ್ಯ ಪ್ರದೇಶದಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. 16 ವರ್ಷದ ಬಾಲಕಿಯನ್ನು ಹೋಟೆಲ್ ಗೆ ಕರೆದುಕೊಂಡು ಹೋದ ಇಬ್ಬರು ಯುವಕರು ಆಕೆಯ ಮೇಲೆ ಅತ್ಯಾಚಾರವೆಗಿದ್ದಲ್ಲದೇ ಕೃತ್ಯವನ್ನು ತಮ್ಮ ಇನ್ನೊಬ್ಬ ಸ್ನೇಹಿತನಿಗೆ ಲೈವ್ ಸ್ಟ್ರೀಮ್ ಮಾಡಿ ತೋರಿಸಿದ್ದಾರೆ. ಅಷ್ಟು ಸಾಲದೆಂಬಂತೆ ಬಳಿಕ ತಮ್ಮ ಈ ಹೀನ ಕೃತ್ಯದ ವಿಡಿಯೋ ಹಾಗೂ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಘಟನೆ ಗ್ವಾಲಿಯರ್ ನಗರದಲ್ಲಿ ನಡೆದಿದ್ದು, 21 ವರ್ಷದ ಯುವಕರು ಜೂನ್ 2 ರಂದು ಬಾಲಕಿಯನ್ನು ಹೋಟೆಲ್ ಗೆ ಕರೆದುಕೊಂಡು ಹೋಗಿದ್ದರೆನ್ನಲಾಗಿದೆ. ಬಳಿಕ ಅತ್ಯಾಚಾರವೆಸಗಿದ್ದು, ಬಾಲಕಿ ಶುಕ್ರವಾರದಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಈ ಆರೋಪಿಗಳು ಹಿಂದೆಯೂ ಇಂತಹುದೇ ಕೃತ್ಯವೆಸಗಿದ್ದರೆಂದು ತನಿಖೆ ವೇಳೆ ತಿಳಿದುಬಂದಿದೆ.
ಇದೀಗ ಬಾಲಕಿ ನೀಡಿದ ದೂರಿನಂತೆ ಆರೋಪಿಗಳ ವಿರುದ್ದ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಜೊತೆಗೆ ಪೋಕ್ಸೋ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯೂ ಕೇಸ್ ದಾಖಲಿಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿರುವಾಗಿ ಕೋತ್ವಾಲಿ ಪೊಲೀಸ್ ಠಾಣೆಯ ಇನ್ ಚಾರ್ಜ್ ರಾಜೀವ್ ಗುಪ್ತಾ ಮಾಹಿತಿ ನೀಡಿದ್ದಾರೆ.