ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರಿಸುತ್ತಿದೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ನವದೆಹಲಿಯಲ್ಲಿ ಎಐಸಿಸಿ ಕಛೇರಿಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವ ಕುರಿತು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಅವರು, ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿಯೇ ಈ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದ್ದು, ಬಂಧನದ ಮೂಲಕ ಪ್ರತಿಭಟನೆ ಹತ್ತಿಕ್ಕುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಆದರೆ ಇದು ಸಾಧ್ಯವಾಗದ ಮಾತು ಎಂದು ಹೇಳಿದ್ದಾರೆ.