alex Certify ಜೂನ್‌ 16 ರಂದು ಕುವೆಂಪು ವಿವಿ ಘಟಿಕೋತ್ಸವ; ಐವರಿಗೆ ಗೌರವ ʼಡಾಕ್ಟರೇಟ್‌ʼ ಪ್ರದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್‌ 16 ರಂದು ಕುವೆಂಪು ವಿವಿ ಘಟಿಕೋತ್ಸವ; ಐವರಿಗೆ ಗೌರವ ʼಡಾಕ್ಟರೇಟ್‌ʼ ಪ್ರದಾನ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32 ನೇ ಘಟಿಕೋತ್ಸವ ಸಮಾರಂಭ ಜೂನ್ 16 ರಂದು ಬೆಳಗ್ಗೆ 10.30 ಕ್ಕೆ ಕುವೆಂಪು ವಿವಿ ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಹೇಳಿದರು.‌

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 31 ಮತ್ತು 32 ನೇ ವಾರ್ಷಿಕ ಘಟಿಕೋತ್ಸವ ಒಂದೇ ದಿನ ನಡೆಯಲಿದೆ. ಈ ಸಮಾರಂಭಕ್ಕೆ ಕುಲಾಧಿಪತಿ ಮತ್ತು ರಾಜ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಹಕುಲಾಧಿಪತಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಆಗಮಿಸಿಲಿದ್ದಾರೆ.  ಎರಡೂ ಘಟಿಕೋತ್ಸವಗಳ ಮುಖ್ಯಭಾಷಣವನ್ನು ಮೈಸೂರಿನ ಭಾರತೀಯ ಆಹಾರ ತಾಂತ್ರಿಕ ಸಂಶೋಧನಾಲಯದ ನಿರ್ದೇಶಕಿ ಡಾ. ಶ್ರೀದೇವಿ ಅನ್ನಪೂರ್ಣ ಸಿಂಗ್ ಅವರು ಮಾಡಲಿದ್ದಾರೆ ಎಂದರು.

ಸಾರ್ವಜನಿಕ ಆಡಳಿತದಲ್ಲಿ ಅಪಾರ ಸೇವೆ ಸಲ್ಲಿಸಿರುವ ಸಾರ್ವಜನಿಕ ಆಡಳಿತದಲ್ಲಿ ಅಪಾರ ಸೇವೆ ಸಲ್ಲಿಸಿರುವ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಹೆಚ್. ಶಂಕರಮೂರ್ತಿ ಅವರು ಮತ್ತು ಇತರೆ 5 ಮಂದಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಕುಲಪತಿಗಳು ತಿಳಿಸಿದರು.

31ನೇ ಘಟಿಕೋತ್ಸವದ ಭಾಗವಾಗಿ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಹೆಚ್. ಶಂಕರಮೂರ್ತಿ, ಶಿಕ್ಷಣತಜ್ಞೆ ಗೀತಾ ನಾರಾಯಣನ್ ಹಾಗೂ ಯೋಗ ಗುರು ಭ. ಮ. ಶ್ರೀಕಂಠ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.

32 ನೇ ಘಟಿಕೋತ್ಸವದ ಭಾಗವಾಗಿ ಶಿಕ್ಷಣತಜ್ಞ, ವಿಶ್ರಾಂತ ಕುಲಪತಿ ಪ್ರೊ. ಟಿ.ವಿ. ಕಟ್ಟಿಮನಿ, ಅಂಧ ಕ್ರಿಕೆಟಿಗ ಮಹಾಂತೇಶ್ ಜಿ. ಕಿವಡಸಣ್ಣವರ್, ಯೋಗಗುರು ಬಾ.ಸು. ಅರವಿಂದ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ತಿಳಿಸಿದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...