ಜೆಡಿಎಸ್ ನಲ್ಲಿದ್ದ ಸಿಎಂ ಇಬ್ರಾಹಿಂ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಇದೀಗ ಅವರು ಕಾಂಗ್ರೆಸ್ ತೊರೆದು ಮತ್ತೆ ಜೆಡಿಎಸ್ ಗೆ ಮರಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ತಾವು ಈ ಹಿಂದೆ ಜೆಡಿಎಸ್ ಬಿಟ್ಟು ಬಂದ ಕಾರಣವನ್ನು ಬಹಿರಂಗಪಡಿಸಿದ್ದಾರೆ.
ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಸಲುವಾಗಿಯೇ ತಾವು ಈ ಹಿಂದೆ ಜೆಡಿಎಸ್ ಬಿಟ್ಟು ಬಂದಿದ್ದಾಗಿ ತಿಳಿಸಿದ ಸಿಎಂ ಇಬ್ರಾಹಿಂ, ಅವರನ್ನು ಬಾದಾಮಿಯಲ್ಲಿ ಗೆಲ್ಲಿಸಿದ್ದೇ ನಾನು ಎಂದು ತಿಳಿಸಿದರು. ಅಲ್ಲದೆ ಸಿದ್ದರಾಮಯ್ಯನವರ ಜಾತಿ ನಿಂದನೆಯನ್ನು ನಾನು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ನಮ್ಮ ಪಕ್ಷದ ಯಾರಾದರೂ ಕಾರ್ಯಕರ್ತರು ಜಾತಿ ನಿಂದನೆ ಮಾಡಿದ್ದರೆ ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ ಎಂದ ಸಿಎಂ ಇಬ್ರಾಹಿಂ, ರಾಜ್ಯಸಭಾ ಚುನಾವಣೆಯಲ್ಲಿ ಯಾರು ಬಿಜೆಪಿಯ ‘ಬಿ’ ಟೀಂ ಎಂಬುದು ರಾಜ್ಯದ ಜನತೆಗೆ ಗೊತ್ತಾಗಿದೆ. ಅಡ್ಡಮತದಾನ ಮಾಡಿರುವ ಗುಬ್ಬಿ ಶ್ರೀನಿವಾಸ್ ಮತ್ತು ಶ್ರೀನಿವಾಸ ಗೌಡರನ್ನು ಜೆಡಿಎಸ್ನಿಂದ ಉಚ್ಚಾಟನೆ ಮಾಡುತ್ತೇವೆ ಎಂದು ತಿಳಿಸಿದರು.