ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರವಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನವಾದ ಇಂದೂ ಕೂಡ ಇಡಿ ಅಧಿಕಾರಿಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆ ನಡೆಸಲಿದ್ದಾರೆ.
ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಇಡಿ ಸಮನ್ಸ್ ಜಾರಿ ಖಂಡಿಸಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಇಡಿ ವಿಚಾರಣೆ ಖಂಡಿಸಿ ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ನಿರತ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರನ್ನು ಮಹಿಳಾ ಪೊಲೀಸರು ಹೊತ್ತುಕೊಂಡು ಹೋಗಿ ಬಸ್ ನಲ್ಲಿ ತುಂಬಿದ್ದಾರೆ.
‘ಡಾಮಿನೊಸ್’ ಮಹಿಳಾ ಉದ್ಯೋಗಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿಯರು…!
ಇನ್ನೊಂದೆಡೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಡಿ ಕಚೇರಿ ಬಳಿ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜಾಗಿದ್ದು, ಭದ್ರೆತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಬ್ದುಲ್ ಕಲಾಂ ರಸ್ತೆಯ ಸುತ್ತ ಸಾವಿರಾರು ಪೊಲೀಸರು, ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಇಡಿ ಕಚೇರಿ ಬಳಿಯೂ ಕಾಂಗ್ರೆಸ್ ಕಾರ್ಯಕರ್ತರು ಧರಣಿಗೆ ಮುಂದಾಗಿದ್ದಾರೆ.