ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಜೂನ್ 16 ಮತ್ತು 17ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮತ್ತು 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಹು ಮುಖ್ಯವಾದ ಮಾಹಿತಿ ಇಲ್ಲಿದೆ.
· ಪರೀಕ್ಷೆಗೆ ಹಾಜರಾಗುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು
· ಓಎಂಆರ್ ಉತ್ತರ ಪತ್ರಿಕೆಯಲ್ಲಿ ತಮ್ಮ ಹೆಸರು, ಸಿಇಟಿ ಸಂಖ್ಯೆ, ಪ್ರಶ್ನೆ ಪತ್ರಿಕೆಯ ವರ್ಶನ್ ಕೋಡ್ ತಪ್ಪದೆ ನಮೂದಿಸಬೇಕು.
· ಮೊದಲ ಗಂಟೆ ಬಾರಿಸಲಿರುವ ನಿಗದಿತ ಅವಧಿಗಿಂತಲೂ ಅರ್ಧ ಗಂಟೆ ಮುಂಚೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
· ವಿದ್ಯಾರ್ಥಿಗಳು ತಮ್ಮ ಪ್ರವೇಶಪತ್ರ (ಅಡ್ಮಿಶನ್ ಟಿಕೆಟ್) ಮತ್ತು ಯಾವುದಾದರೂ ಒಂದು ಸೂಕ್ತ ಗುರುತಿನ ಪತ್ರವನ್ನು ತರಬೇಕು (ಕಾಲೇಜಿನ ಗುರುತು ಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಆಧಾರ್/ಪ್ಯಾನ್ ಕಾರ್ಡ್, ದ್ವಿತೀಯ ಪಿಯುಸಿ/12ನೇ ತರಗತಿಯ ಪ್ರವೇಶ ಪತ್ರ ಇತ್ಯಾದಿಗಳ ಪೈಕಿ ಒಂದು).
· ಯಾವುದೇ ತರಹದ ಕೈಗಡಿಯಾರಗಳನ್ನು ಕಟ್ಟಿಕೊಂಡು ಬರುವಂತಿಲ್ಲ.
· ಟ್ಯಾಬ್, ಮೊಬೈಲ್, ಕ್ಯಾಲ್ಕುಲೇಟರುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ.