alex Certify BIG NEWS: ಬೀದಿ ರೌಡಿಗಳು, ಬಿಟ್ ಕಾಯಿನ್ ಆಸಾಮಿಗಳಿಗೆ ಮುಂಚೂಣಿ ಘಟಕದ ನಾಯಕತ್ವ; ಎಲ್ಲಾ ಗೂಂಡಾಗಿರಿಯ ತುಣುಕುಗಳೇ; ಡಿಕೆಶಿ ಆಯ್ಕೆಗಳು ಅವರಂತೆಯೇ ಇರುತ್ತದೆ; BJP ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೀದಿ ರೌಡಿಗಳು, ಬಿಟ್ ಕಾಯಿನ್ ಆಸಾಮಿಗಳಿಗೆ ಮುಂಚೂಣಿ ಘಟಕದ ನಾಯಕತ್ವ; ಎಲ್ಲಾ ಗೂಂಡಾಗಿರಿಯ ತುಣುಕುಗಳೇ; ಡಿಕೆಶಿ ಆಯ್ಕೆಗಳು ಅವರಂತೆಯೇ ಇರುತ್ತದೆ; BJP ವಾಗ್ದಾಳಿ

ಬೆಂಗಳೂರು: ದೆಹಲಿಯಲ್ಲಿ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು, ಬಂಧನಕ್ಕೆ ಒಳಗಾದ ಶಾಸಕ, ಸಂಸದರಿಗೂ ಗೂಂಡಾಗಿರಿಯ ಘನ ಇತಿಹಾಸ ಇದೆ‌. ಒಬ್ಬರು ಕನಕಪುರದ ಅಘೋಷಿತ ರೌಡಿ, ಇನ್ನೊಬ್ಬರು ‘ಗೂಂಡಾರಾಯರು’ ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದೆ.

ಯತಾರಾಜಾ ತಥಾ ಪ್ರಜಾ ಎಂಬುದು ಕಾಂಗ್ರೆಸ್ಸಿಗರಿಗೆ ಅನ್ವಯವಾಗುತ್ತದೆ. ಕೊತ್ವಾಲನ ಶಿಷ್ಯ ಕೆಪಿಸಿಸಿ ಅಧ್ಯಕ್ಷರಾದರೆ, ಕಾಲೇಜಿನಲ್ಲಿ ಬ್ಲೇಡು, ಚಾಕು ಚೂರಿ ಹಿಡಿದು ಗೂಂಡಾಗಿರಿ ನಡೆಸುತ್ತಿದ್ದವರು ಮೇಲ್ಮನೆಯ ವಿಪಕ್ಷ ನಾಯಕ! ಇ‌ವರು ಜನರ ಪ್ರೀತಿಯಿಂದ ನಾಯಕರಾಗಿಲ್ಲ, ಜನರಿಗೆ ಭೀತಿ ಹುಟ್ಟಿಸಿ ನಾಯಕರಾಗಿದ್ದಾರೆ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ವಾಗ್ದಾಳಿ ನಡೆಸಿದೆ.

ಪಬ್‌ನಲ್ಲಿ ಸಿಕ್ಕ ಸಿಕ್ಕವರ ಮೇಲೆ ಬಾಟಲಿಯಿಂದ ಹಲ್ಲೆ ಮಾಡುತ್ತಿದ್ದ ರೌಡಿ‌‌ ನಲಪಾಡ್ ಯುವ ಕಾಂಗ್ರೆಸ್ ಅಧ್ಯಕ್ಷ. ಗೊರಿಲ್ಲಾ ಶ್ರೀನಿವಾಸ ರಾಷ್ಟ್ರೀಯ ಅಧ್ಯಕ್ಷ. ಎಲ್ಲರೂ ಗೂಂಡಾಗಿರಿಯ ತುಣುಕುಗಳೇ. ಕೊತ್ವಾಲ್ ಶಿಷ್ಯ ಡಿಕೆಶಿ ಆಯ್ಕೆಗಳು ಅವರಂತೆಯೇ ಇರುತ್ತದೆ. ಬೀದಿ ರೌಡಿಗಳು, ಬಿಟ್ ಕಾಯಿನ್ ಆಸಾಮಿಗಳಿಗೆ ಮುಂಚೂಣಿ ಘಟಕದ ನಾಯಕತ್ವ ನೀಡಲಾಗಿದೆ. ರೌಡಿ ಗುರುವಿಗೆ ಬೀದಿ ಗೂಂಡಾಗಳೇ ಶಿಷ್ಯರು! ಎಂದು ಗುಡುಗಿದೆ.

ಕನಕಪುರದ ಬಂಡೆಮಕ್ಕಳ ಮೇಲಿರುವ ಐಪಿಸಿ ಸೆಕ್ಷನ್ ಬಗ್ಗೆ ಬರೆದರೆ, ಪುಸ್ತಕವೇ ಬರೆಯಬಹುದು. ಇವರ ಹಾದಿಯನ್ನೇ ಯುವಾಧ್ಯಕ್ಷರು ಅನುಸರಿಸಿಕೊಂಡು ಹೋಗುತ್ತಿದ್ದಾರೆ. ಪದಾಧಿಕಾರಿಗಳ ಪಟ್ಟಿಯಲ್ಲಿರುವವರಲ್ಲೂ ಐಪಿಸಿ ಸೆಕ್ಷನ್ ಬೋರ್ಡ್ ಹಾಕಿಕೊಂಡವರ ಸಂಖ್ಯೆ ಕಡಿಮೆಯೇನಿಲ್ಲ! ಕೈ ನಾಯಕರು ಶ್ರಮಿಕರಿಗೆ, ದಲಿತರಿಗೆ, ಮಹಿಳೆಯರಿಗೆ ಸಹಾಯ ಹಸ್ತ ಚಾಚುವುದಿಲ್ಲ. ಅವರದ್ದೇನಿದ್ದರೂ ಕೈ ಕೈ ಮಿಲಾಯಿಸುವುದಷ್ಟೇ! ಅಣ್ಣನಂತೆ ತಮ್ಮ, ನಾಯಕರಂತೆ ಕಾರ್ಯಕರ್ತರು. ಕನಕಪುರವಿರಲಿ, ಬೆಂಗಳೂರಿರಲಿ ಅಥವಾ ದೆಹಲಿ ಇರಲಿ ಗೂಂಡಾಗಿರಿ ಮಾಡುವುದೇ ಇವರ ಪ್ರವೃತ್ತಿ. ಗೂಂಡಾ ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...