ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ತಿಕೋಟಾ ತಾಲೂಕಿನ ತೊರವಿ ತಾಂಡಾದಲ್ಲಿ ಬುಧವಾರದಂದು ಈ ಆಘಾತಕಾರಿ ಘಟನೆ ನಡೆದಿದ್ದು, 27 ವರ್ಷದ ಅನಿತಾ ಪಿಂಟು ಜಾದವ್ ತನ್ನ ಮೂವರು ಮಕ್ಕಳಾದ ಪ್ರವೀಣ (6) ಸುದೀಪ (4) ಮತ್ತು ಮಮದಿಕಾ(2) ಜೊತೆಗೆ ಸಾವನ್ನಪ್ಪಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಲ್ವರ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.