alex Certify BIG NEWS: ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ರಾಷ್ಟ್ರಪತಿ ಚುನಾವಣಾ ಕಣಕ್ಕಿಳಿಯಲಿದ್ದಾರಾ ಮಾಜಿ ಪ್ರಧಾನಿ ದೇವೇಗೌಡ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ರಾಷ್ಟ್ರಪತಿ ಚುನಾವಣಾ ಕಣಕ್ಕಿಳಿಯಲಿದ್ದಾರಾ ಮಾಜಿ ಪ್ರಧಾನಿ ದೇವೇಗೌಡ…?

ಜುಲೈ 24ರಂದು ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಜುಲೈ 18ರಂದು ಈ ಚುನಾವಣೆಗೆ ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ.

ಇದರ ಮಧ್ಯೆ ಪ್ರತಿಪಕ್ಷಗಳು ಒಮ್ಮತದ ಅಭ್ಯರ್ಥಿಯನ್ನು ರಾಷ್ಟ್ರಪತಿ ಚುನಾವಣಾ ಕಣಕ್ಕಿಳಿಸಲು ಭರ್ಜರಿ ರಣತಂತ್ರ ರೂಪಿಸುತ್ತಿದ್ದು, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದರ ನೇತೃತ್ವ ವಹಿಸಿದ್ದಾರೆ.

ನವದೆಹಲಿಯಲ್ಲಿ ಪ್ರತಿಪಕ್ಷಗಳು ಈ ಕುರಿತಂತೆ ಸಭೆ ನಡೆಸುತ್ತಿದ್ದು, ಈ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಮ್ಮ ಪುತ್ರ ಕುಮಾರಸ್ವಾಮಿಯವರೊಂದಿಗೆ ಭಾಗವಹಿಸಿದ್ದಾರೆ. ಮೂಲಗಳ ಪ್ರಕಾರ ರಾಷ್ಟ್ರಪತಿ ಚುನಾವಣೆಯಲ್ಲಿ ದೇವೇಗೌಡರು ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮೊದಲು ಶರದ್ ಪವಾರ್ ಅವರನ್ನು ಕಣಕ್ಕಿಳಿಸಲು ಪ್ರತಿಪಕ್ಷಗಳ ನಾಯಕರು ಪ್ರಯತ್ನ ನಡೆಸಿದರಾದರೂ ಸಹ ಶರದ್ ಪವಾರ್ ಅದಕ್ಕೆ ಸಮ್ಮತಿಸಲಿಲ್ಲ ಎನ್ನಲಾಗಿದೆ. ಹೀಗಾಗಿ ಹಿರಿಯರಾದ ದೇವೇಗೌಡರು ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾದರೂ ಅಚ್ಚರಿಯಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...