ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೊದಲು ಜೂನ್ 15ಕ್ಕೆ ಸಾರ್ವತ್ರಿಕ ವರ್ಗಾವಣೆ ಕೊನೆಗೊಳ್ಳುತ್ತದೆ ಎಂದು ತಿಳಿಸಲಾಗಿತ್ತಾದರೂ ಇದೀಗ ಈ ಪ್ರಕ್ರಿಯೆಯನ್ನು ಜೂನ್ 30ರ ವರೆಗೆ ವಿಸ್ತರಿಸಲಾಗಿದೆ.
ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅವಧಿಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ತೀವ್ರವಾದ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ.