ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಇಂದಿನಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಇದನ್ನು ಭಾರಿ ಕಟ್ಟುನಿಟ್ಟಿನಿಂದ ನಡೆಸಲಾಗುತ್ತಿದೆ.
ರಾಜ್ಯದ ಒಟ್ಟು 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಪೈಕಿ 87 ಕೇಂದ್ರಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿವೆ. ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಪ್ರತಿ ಕೇಂದ್ರಕ್ಕೂ ಸಹಾಯಕ ಆಯುಕ್ತರ ದರ್ಜೆಯ ಅಧಿಕಾರಿಯೊಬ್ಬರನ್ನು ಪರೀಕ್ಷಾ ವೀಕ್ಷಕರಾಗಿ ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಪರೀಕ್ಷೆಗೆ ನೀಟ್ ಮಾದರಿ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲಾಗುತ್ತಿದ್ದು, ವಿದ್ಯಾರ್ಥಿನಿಯರು ಮೂಗುತಿ, ಕಿವಿಯೋಲೆಯನ್ನು ಸಹ ಧರಿಸುವಂತಿಲ್ಲ. ಒಂದೊಮ್ಮೆ ಇವುಗಳನ್ನು ಧರಿಸಿಕೊಂಡು ಬಂದಿದ್ದರೆ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮುನ್ನ ತೆಗೆಯಬೇಕಾಗುತ್ತದೆ.