ರಾಯಚೂರು: ರಾಯಚೂರಿನಲ್ಲಿ ಕಲುಷಿತ ನೀರು ಸೇವನೆಗೆ ಮತ್ತೋರ್ವರು ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ವಾರ್ಡ್ ಸಂಖ್ಯೆ 14ರ ಮಚ್ಚಿಬಜಾರ್ ನ ಶಮೀಮ್ ಬೇಗಂ (48) ಎಂಬ ಮಹಿಳೆ ಕಲುಷಿತ ನೀರಿನಿಂದ ಅನಾರೋಗ್ಯಕ್ಕೀಡಾಗಿ ಇಂದು ಮೃತಪಟ್ಟಿದ್ದಾರೆ.
ವಾಂತಿ-ಭೇದಿಯಿಂದ ಬಳಲುತ್ತಿದ್ದ ಶಮೀಮ್ ಬೇಗಂ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇದೀಗ ಮೃತಪಟ್ಟಿದ್ದಾರೆ. ಕಲುಷಿತ ನೀರು ಸೇವನೆಯಿಂದ ರಾಯಚೂರಿನಲ್ಲಿ 60ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ಗ್ರಾಮಸ್ಥರಲ್ಲಿ ಇನ್ನಷ್ಟು ಆತಂಕ ಹೆಚ್ಚಿದೆ.