ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಡಿಎಆರ್ ಹೆಡ್ ಕಾನ್ಸ್ ಟೇಬಲ್ ಓರ್ವರು ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ.
ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದ ಮುಖ್ಯಪೇದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಏಕಾಏಕಿ ತಮಗೆ ತಾವೇ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೌಟುಂಬಿಕ ಕಲಹದಿಂದ ಹಲವು ದಿನಗಳಿಂದ ಕೊಪ್ಪದ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.