ಬೆಂಗಳೂರು: ಕೋವಿಡ್ ನಂತಹ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ, ರ್ಯಾಲಿಗೆ ಮುಂದಾಗುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಅದಕ್ಕೆ ಕಾಂಗ್ರೆಸ್ ಹೊಣೆಯಾಗಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ರಾಹುಲ್ ಗಾಂಧಿಗೆ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ನಾಯಕರು ಇಂದೂ ಕೂಡ ಪ್ರತಿಭಟನೆ ನಡೆಸುತ್ತಿದ್ದು, ರಾಜಭವನ ಚಲೋ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಪ್ರತಿಭಟನೆ ಮಾಡಬೇಕು ಎಂದಾದರೆ ಫ್ರೀಡಂಪಾರ್ಕ್ ನಲ್ಲಿ ಮಾಡಲಿ. ಅದನ್ನು ಬಿಟ್ಟು ಜನರನ್ನು ಸೇರಿಸಿ ರಸ್ತೆಯಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲ. ಕೋವಿಡ್ ನಿಯಮ ಉಲ್ಲಂಘನೆ ಅಡಿ ಕಾಂಗ್ರೆಸ್ ನಾಯಕರ ವಿರುದ್ಧ ಕೇಸ್ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.
SHOCKING NEWS: ಡಿಸಿ ಕಚೇರಿಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣದ DAR ಮುಖ್ಯಪೇದೆ
ಒಂದು ಕಡೆ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಇನ್ನೊಂದು ಕಡೆ ಸಂವಿಧಾನಕ್ಕೆ ಅಗೌರವ ತೋರುತ್ತಾರೆ. ಕಾಂಗ್ರೆಸ್ ನಾಯಕರ ನಡೆ ನಾಚಿಕೆ ತರಿಸುವಂತದ್ದು. ಈ ಹಿಂದೆ ಪಿ.ವಿ.ನರಸಿಂಹ ರಾವ್, ಯೆಚೂರಿಯವರನ್ನು ಇಡಿ ವಿಚಾರಣೆ ನಡೆಸಿತ್ತು. ಖರ್ಗೆಯವರನ್ನೂ ವಿಚಾರಣೆ ನಡೆಸಿತ್ತು. ಆಗ ಯಾರೂ ಪ್ರತಿಭಟನೆಗೆ ಮುಂದಾಗಿಲ್ಲ ಈಗ ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.