ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಅಗ್ನಿಪಥ್ ಯೋಜನೆಗೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಬಿಹಾರದ ಬಳಿಕ ಈಗ ಹರಿಯಾಣದ ಪಲ್ವಾನ್ ನಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಪ್ರತಿಭಟನಾನಿರತ ಯುವಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಲಾಗಿದೆ. ಬಿಹಾರದಲ್ಲಿ ಬುಧವಾರದಿಂದ ಆರಂಭವಾಗಿರುವ ಪ್ರತಿಭಟನೆ ಇಂದೂ ಸಹ ಮುಂದುವರೆದಿದ್ದು, ರೈಲ್ವೇ ನಿಲ್ದಾಣಕ್ಕೆ ನುಗ್ಗಿ ದಾಂಧಲೆ ನಡೆಸಲಾಗಿದೆ.
ಅಗ್ನಿಪಥ ಯೋಜನೆಯಡಿ 17 ವರೆ ವರ್ಷದಿಂದ 21 ವರ್ಷದೊಳಗಿನ ಯುವಕರು ಸೇನೆ ಸೇರಲು ಅವಕಾಶ ಪಡೆದುಕೊಳ್ಳಲಿದ್ದಾರೆ. ಹೀಗೆ ಸೇರ್ಪಡೆಗೊಂಡ ಯುವಕರಿಗೆ ತರಬೇತಿ ಸಹಿತ ನಾಲ್ಕು ವರ್ಷದ ಸೇವಾ ಅವಧಿಗೆ ತರಬೇತಿ ನೀಡಿ ಸೈನ್ಯದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ನಾಲ್ಕು ವರ್ಷಗಳ ಬಳಿಕ ಶೇಕಡ 25 ರಷ್ಟು ಅಗ್ನಿ ವೀರರನ್ನು ಸಶಸ್ತ್ರ ಪಡೆಗೆ ನೇಮಕ ಮಾಡಿಕೊಳ್ಳಲಿದ್ದು, ಉಳಿದವರು ನಿರ್ಗಮಿಸುತ್ತಾರೆ. ಆದರೆ ಇದಕ್ಕೆ ಯುವ ಜನತೆಯಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.