ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರಾಗಿದ್ದಾರೆ.
ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿಚಾರಣೆಗಾಗಿ ಕೋರ್ಟ್ ಗೆ ಹಾಜರಾಗಿದ್ದು, ಜಾಮೀನು ಕೋರಿ ಬಿ ಎಸ್ ವೈ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಅಭಿಯೋಜಕರಿಗೆ ಕೋರ್ಟ್ ಸೂಚನೆ ನೀಡಿದೆ.
ಇದೇ ವೇಳೆ ವಿಚಾರಣೆಯನ್ನು ಜೂನ್ 18ಕ್ಕೆ ಮುಂದೂಡಿ ಕೋರ್ಟ್ ಆದೇಶ ನೀಡಿದೆ.