ಹಣ ಇದೆ ಎಂದು ವಕೀಲರನ್ನು ನೇಮಿಸಿಕೊಂಡು ವಿಚಾರಣೆಗೆ ಪದೇ ಪದೇ ಗೈರುಹಾಜರಾದರೆ ಸುಮ್ಮನಿರಲು ಸಾಧ್ಯವಿಲ್ಲ. ಜೂನ್ 24ರಂದು ನಡೆಯುವ ವಿಚಾರಣೆ ವೇಳೆ ಖುದ್ದಾಗಿ ಹಾಜರಿರಬೇಕು ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ರಾಜ್ಯ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ.
ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಎ. ಮಂಜು ಮತ್ತು ದೇವರಾಜೇಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಈ ಮಹತ್ವದ ಸೂಚನೆ ನೀಡಿದೆ.