ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಪ್ರಧಾನಿ ಕಾರ್ಯಕ್ರಮದಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದಾರೆ.
ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರಿಗೂ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಜತೆ ಕಾರ್ಯಕ್ರಮಗಳಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸುತ್ತಿರುವುದರಿಂದ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ.
ನಾಳೆಯಿಂದ ಎರಡು ದಿನಗಳ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಜೂನ್ 21ರಂದು ಮೈಸೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.