ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುದರ್ಶನ್ ಶೆಟ್ಟಿ(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಹನುಮಂತನಗರ ಠಾಣೆಯ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ ನಂತರ ಪಿಎಸ್ಐ ಆಗಿ ಆಯ್ಕೆಯಾಗಿದ್ದರು. ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ನೇಮಕವಾಗಿದ್ದರು. ಮಾನಸಿಕವಾಗಿ ನೊಂದು ನೇಣಿಗೆ ಶರಣಾಗಿದ್ದಾರೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.