ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಈಗಾಗಲೇ ದೆಹಲಿಯಿಂದ ಹೊರಟಿದ್ದಾರೆ. ಅದಕ್ಕೂ ಮುನ್ನ ತಮ್ಮ ಕರ್ನಾಟಕ ಭೇಟಿಯ ವಿವರಗಳನ್ನು ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಮೋದಿಯವರ ಭೇಟಿ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಏಳು ಸುತ್ತಿನ ಕೋಟೆಯಂತಾಗಿದ್ದು, ಪೊಲೀಸ್ ಸರ್ಪಗಾವಲನ್ನು ಹಾಕಲಾಗಿದೆ. ಸುಮಾರು 10 ಸಾವಿರ ಪೊಲೀಸರು ಭದ್ರತಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಯಲಹಂಕ ಏರ್ ಬೇಸ್ ನಲ್ಲಿ ನರೇಂದ್ರ ಮೋದಿಯವರು ಬಂದಿಳಿಯಲಿದ್ದು, ಅವರ ಸ್ವಾಗತಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಚಿವ ಸಂಪುಟದ ಹಲವು ಸಹೋದ್ಯೋಗಿಗಳು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾರೆ.