ನವದೆಹಲಿ: ಕೇಂದ್ರದ ಅಗ್ನಿಪಥ್ ಯೋಜನೆಗೆ ವ್ಯಾಪಕ ವಿರೋಧದ ನಡುವೆ RPG ಎಂಟರ್ ಪ್ರೈಸಸ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಅಗ್ನಿವೀರ್ ಗಳಿಗೆ ಉದ್ಯೋಗದ ಭರವಸೆ ನೀಡಿದ್ದಾರೆ.
ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಯೋಜನೆಯ ವಿರುದ್ಧದ ಹಿಂಸಾಚಾರದ ಬಗ್ಗೆ ಬೇಸರ ವ್ಯಕ್ತಪಡಿಸಿ, ಮುಂದೆ ಅಗ್ನಿವೀರರಿಗೆ ಉದ್ಯೋಗದ ಭರವಸೆ ನೀಡಿದ್ದಾರೆ.
ಇದೇ ರೀತಿ ಆರ್.ಪಿ.ಜಿ. ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಟ್ವೀಟ್ ಮಾಡಿ, ಆರ್.ಪಿ.ಜಿ. ಗ್ರೂಪ್ ಕೂಡ ಅಗ್ನಿವೀರ್ ಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಸ್ವಾಗತಿಸುತ್ತದೆ. ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಲು ಮತ್ತು ನಮ್ಮ ಯುವಕರಿಗೆ ಭವಿಷ್ಯದ ಭರವಸೆ ನೀಡಲು ಇತರ ಕಾರ್ಪೊರೇಟ್‌ಗಳು ಸಹ ನಮ್ಮೊಂದಿಗೆ ಸೇರಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಎಂದು ತಿಳಿಸಿದ್ದಾರೆ.