alex Certify ಅಪಘಾತ ಪರಿಹಾರ ನೀಡದ KSRTC; ನ್ಯಾಯಾಲಯದ ಆದೇಶದ ಮೇರೆಗೆ 4 ಬಸ್ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತ ಪರಿಹಾರ ನೀಡದ KSRTC; ನ್ಯಾಯಾಲಯದ ಆದೇಶದ ಮೇರೆಗೆ 4 ಬಸ್ ಜಪ್ತಿ

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ಬಸ್ಸುಗಳನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ.

ದಾವಣಗೆರೆಯಲ್ಲಿ ಈ ಬಸ್ಸುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪರಿಹಾರ ಹಣ ನೀಡುವ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ.

ಘಟನೆಯ ವಿವರ: ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಮಂತಗಿ ಗ್ರಾಮದ ಸಾಫ್ಟ್ ವೇರ್ ಇಂಜಿನಿಯರ್ ಸಂಜೀವ್ ಪಾಟೀಲ್ ಎಂಬವರಿಗೆ 2013ರ ನವೆಂಬರ್ 6 ರಂದು ಹಾವೇರಿ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ ತುಮಕೂರು ಸಮೀಪದ ಟೋಲ್ ಬಳಿ ಡಿಕ್ಕಿ ಹೊಡೆದಿತ್ತು.

ಇದರ ಪರಿಣಾಮ ಅವರು ಸಾವನ್ನಪ್ಪಿದ್ದು, ಪ್ರಕರಣದ ವಿಚಾರಣೆ ನಡೆಸಿದ್ದ ದಾವಣಗೆರೆ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ 2,82,42,885 ರೂ. ಗಳ ಪರಿಹಾರ ನೀಡುವಂತೆ ಆದೇಶ ನೀಡಿತ್ತು. ಆದರೆ ಅಲ್ಪ ಪರಿಹಾರ ನೀಡಿದ ಸಂಸ್ಥೆ ಉಳಿದ ಪರಿಹಾರವನ್ನು ಮತ್ತೆ ನೀಡುವುದಾಗಿ ಹೇಳಿ ಅಂದು ಜಪ್ತಿಯಾಗಿದ್ದ ಬಸ್ ಗಳನ್ನು ವಾಪಸ್ ಪಡೆದಿತ್ತು. ಆದರೆ ಪರಿಹಾರ ನೀಡಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...