ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಾಮರಾಜನಗರ, ಜಿಲ್ಲೆಗಳಲ್ಲಿ ಇಂದಿನಿಂದ ಜೂನ್24ರವರೆಗೆ ಭಾರಿ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
ನಾಲ್ಕು ದಿನಗಳ ಕಾಲ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 23ರಿಂದ ಉತ್ತರ ಭಾಗಕ್ಕೆ ನೈಋತ್ಯ ಮುಂಗಾರು ಪ್ರವೇಶಿಸಲಿದೆ ಎಂದು ಇಲಾಖೆ ತಿಳಿಸಿದೆ.