ಮಹಾರಾಷ್ಟ್ರದಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಸಚಿವ ಏಕನಾಥ ಶಿಂಧೆ 40 ಕ್ಕೂ ಅಧಿಕ ಶಾಸಕರೊಂದಿಗೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಏಕನಾಥ ಶಿಂಧೆ ಸೇರಿದಂತೆ ಈ ಶಾಸಕರುಗಳು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸರ್ಕಾರಕ್ಕೆ ನೀಡಿರುವ ಬೆಂಬಲ ಹಿಂಪಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದರ ಮಧ್ಯೆ ಏಕನಾಥ ಶಿಂಧೆ ಅವರ ಮನವೊಲಿಸಲು ಮುಖ್ಯಮಂತ್ರಿ ಉದ್ದವ್ ಠಾಕ್ರೆ ತೀವ್ರ ಪ್ರಯತ್ನ ನಡೆಸಿದ್ದು, ಆದರೆ ಶಿಂಧೆ ಮಾತ್ರ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲವೆಂದು ಹೇಳಲಾಗಿದೆ.
ಇದರ ಮಧ್ಯೆ ಉದ್ದವ್ ಸಂಪುಟದಲ್ಲಿ ಸಚಿವರಾಗಿರುವ ಅವರ ಪುತ್ರ ಆದಿತ್ಯ ಠಾಕ್ರೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ತಮ್ಮ ಹೆಸರಿನೊಂದಿಗಿದ್ದ ʼಮಿನಿಸ್ಟರ್ʼ ಪದವನ್ನು ಕೈಬಿಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಸದ್ಯಕ್ಕೆ ಉಂಟಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಲು ಆದಿತ್ಯ ಠಾಕ್ರೆ ತಮ್ಮ ಸಚಿವ ಸ್ಥಾನ ತ್ಯಜಿಸಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.