ಬೆಂಗಳೂರು: ಜೆಡಿಎಸ್ ಬಂಡಾಯ ಶಾಸಕರನ್ನು ಉಚ್ಛಾಟನೆ ಮಾಡಲಾಗಿದೆ. ಜೆಡಿಎಸ್ ಪಕ್ಷದಿಂದ ಇಬ್ಬರು ಶಾಸಕರನ್ನು ಉಚ್ಛಾಟನೆ ಮಾಡಲಾಗಿದೆ.
ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಕೋಲಾರ ಶಾಸಕ ಶ್ರೀನಿವಾಸ ಗೌಡ ಮತ್ತು ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.
ರಾಜ್ಯಸಭಾ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿದ ಇವರು ಪಕ್ಷದ ಪರವಾಗಿ ಮತ ಚಲಾಯಿಸಿರಲಿಲ್ಲ. ಜೆಡಿಎಸ್ ನಿಂದ ಈಗಾಗಲೇ ದೂರ ನಡೆದಿರುವ ಇಬ್ಬರೂ ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಹೇಳಲಾಗಿದೆ.