ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆ ಕುರಿತಂತೆ ಅಪಸ್ವರ ವ್ಯಕ್ತವಾಗಿದ್ದು, ಇತ್ತೀಚೆಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಪರಿಷ್ಕರಣೆ ವೇಳೆ ಬಸವಣ್ಣ, ಅಂಬೇಡ್ಕರ್, ಕುವೆಂಪು ಸೇರಿದಂತೆ ಹಲವು ಮಹನೀಯರ ವಿಚಾರಗಳಿಗೆ ಅಪಚಾರವೆಸಗಲಾಗಿದ್ದು, ಹೀಗಾಗಿ ಪರಿಷ್ಕರಣೆ ಪಠ್ಯಗಳನ್ನು ಹಿಂಪಡೆದು ಈ ಹಿಂದಿನ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಪಠ್ಯಗಳನ್ನೇ ಮುಂದುವರಿಸಬೇಕೆಂಬ ಆಗ್ರಹ ಕೇಳಿಬಂದಿತ್ತು.
ಆಕ್ಷೇಪಾರ್ಹ ಪೋಸ್ಟ್ ಹಾಕಿ ಜೈಲು ಪಾಲಾಗಿದ್ದ ನಟಿಗೆ ಕೊನೆಗೂ ಬೇಲ್…!
ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ನಾಡಿನ ಹಲವು ಗಣ್ಯರು ಪಾಲ್ಗೊಂಡಿದ್ದು, ಆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದ ದೇವೇಗೌಡರು ರೋಹಿತ್ ಚಕ್ರತೀರ್ಥ ನಂತಹ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಷ್ಕರಣೆಗೆ ನೇಮಿಸಿದ್ದೇ ಮೊದಲ ತಪ್ಪು. ಪರಿಷ್ಕರಣೆ ವೇಳೆ ಹಲವು ಲೋಪಗಳಾಗಿರುವುದರಿಂದ ಇದನ್ನು ಹಿಂಪಡೆದು ಹಳೆಯ ಪಠ್ಯಪುಸ್ತಕಗಳನ್ನೇ ಮುಂದುವರಿಸಬೇಕೆಂದು ಒತ್ತಾಯಿಸಿದ್ದರು.
ದೇವೇಗೌಡರ ಪತ್ರದ ಹಿನ್ನೆಲೆಯಲ್ಲಿ ಬುಧವಾರದಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಮುಖ್ಯಮಂತ್ರಿಗಳು, ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ಗುರುವಾರದಂದು ಅವರೇ ಖುದ್ದಾಗಿ ದೇವೇಗೌಡರ ಪತ್ರಕ್ಕೆ ಸ್ಪಷ್ಟನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.