ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿದ ನಂತರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಕ್ತಾರೆ ಸ್ಥಾನದಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರಿಗೆ ಕೋಲ್ಕತ್ತಾ ಪೊಲೀಸರು ಗುರುವಾರ ಹೊಸ ಸಮನ್ಸ್ ಜಾರಿ ಮಾಡಿದ್ದಾರೆ.
ಜೂನ್ 25 ರಂದು ವಿಚಾರಣೆಗೆ ಹಾಜರಾಗುವಂತೆ ನೂಪುರ್ ಶರ್ಮಾ ಅವರಿಗೆ ಸಮನ್ಸ್ ನೀಡಲಾಗಿದೆ. ಈ ಹಿಂದೆ ಜೂನ್ 20 ರಂದು ಶರ್ಮಾ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಪೊಲೀಸರು ಸಮನ್ಸ್ ನೀಡಿದ್ದರು. ನರ್ಕೆಲ್ದಂಗ ಪೊಲೀಸ್ ಠಾಣೆಗೆ ಹಾಜರಾಗುವಂತೆ ತಿಳಿಸಿ ಸಮನ್ಸ್ ಜಾರಿ ಮಾಡಲಾಗಿದೆ.
ನೂಪುರ್ ಶರ್ಮಾ ಅವರ ಹೇಳಿಕೆಗೆ ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ನೂಪುರ್ ಶರ್ಮಾ ವಿರುದ್ಧ ಹಲವು ಎಫ್ಐಆರ್ ದಾಖಲಾಗಿವೆ.