ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ದ್ರೌಪದಿ ಮುರ್ಮು ಅವರು ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರುಗಳು, ಎನ್.ಡಿ.ಎ. ಮೈತ್ರಿಕೂಟದ ಇತರೆ ಪಕ್ಷಗಳ ನಾಯಕರು ಹಾಜರಿದ್ದು, ದ್ರೌಪದಿ ಮುರ್ಮು ಅವರಿಗೆ ಶುಭ ಹಾರೈಸಿದ್ದಾರೆ.
ಜಾರ್ಖಂಡ್ ಮಾಜಿ ರಾಜ್ಯಪಾಲರಾಗಿರುವ ದ್ರೌಪದಿ ಮುರ್ಮು ಅವರು ಆದಿವಾಸಿ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಎನ್.ಡಿ.ಎ. ಮೈತ್ರಿಕೂಟ ಬಹುಮತ ಹೊಂದಿರುವ ಕಾರಣ ದ್ರೌಪದಿ ಮುರ್ಮು ಅವರ ಆಯ್ಕೆ ಖಚಿತವೆಂದು ಹೇಳಲಾಗಿದೆ.