alex Certify ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಉಚಿತ ಆಹಾರ ಧಾನ್ಯ ವಿತರಿಸುವ ಗರೀಬ್ ಕಲ್ಯಾಣ್ ಯೋಜನೆ ಸ್ಥಗಿತ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಉಚಿತ ಆಹಾರ ಧಾನ್ಯ ವಿತರಿಸುವ ಗರೀಬ್ ಕಲ್ಯಾಣ್ ಯೋಜನೆ ಸ್ಥಗಿತ ಸಾಧ್ಯತೆ

ನವದೆಹಲಿ: ದೇಶದಲ್ಲಿ ಕೊರೋನಾ ತೀವ್ರ ಏರಿಕೆ ಕಂಡು ಬಂದ ಸಂದರ್ಭದಲ್ಲಿ ಜಾರಿಗೊಳಿಸಲಾಗಿದ್ದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ನಿಲ್ಲಿಸುವ ಸಾಧ್ಯತೆ ಇದೆ. ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಡವರಿಗೆ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುತ್ತಿದ್ದು, ಈ ಯೋಜನೆಯನ್ನು ನಿಲ್ಲಿಸುವಂತೆ ಕೇಂದ್ರ ವೆಚ್ಚ ಇಲಾಖೆ ಸರ್ಕಾರಕ್ಕೆ ಮನವಿ ಮಾಡಿದೆ.

ಸೆಪ್ಟಂಬರ್ ಅಂತ್ಯದ ನಂತರ ಗರೀಬ್ ಕಲ್ಯಾಣ್ ಯೋಜನೆಯನ್ನು ನಿಲ್ಲಿಸುವಂತೆ ವೆಚ್ಚ ಇಲಾಖೆಯಿಂದ ಕೋರಲಾಗಿದೆ. ಲಾಕ್ಡೌನ್ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವಾಗುವ ಉದ್ದೇಶದಿಂದ ಈ ಮಹಾತ್ವಾಕಾಂಕ್ಷಿ ಯೋಜನೆ ಜಾರಿ ಮಾಡಲಾಗಿತ್ತು.

ಈ ಯೋಜನೆಯಡಿ ಅರ್ಹ ಕುಟುಂಬದ ಪ್ರತಿ ವ್ಯಕ್ತಿಗೆ ಉಚಿತವಾಗಿ 5 ಕೆಜಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ. 81 ಕೋಟಿ ಜನ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಸೆಪ್ಟಂಬರ್ ಅಂತ್ಯದ ನಂತರ ಯೋಜನೆ ಸ್ಥಗಿತಗೊಳಿಸಬೇಕೆಂಬ ಸಲಹೆ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...