ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ ಇಂದು ನಿನ್ನೆಗಿಂತ ಕಡಿಮೆ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ 15,940 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 20 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,974 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 91,779 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 12,425 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,27,61,481 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 15,73,341 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,96,94,40,932 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,63,103 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.